ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದ ಸಂಚಾರವನ್ನು ಸುಗಮಗೊಳಿಸಲು ಮತ್ತು ಸುರಕ್ಷತೆ ಹೆಚ್ಚಿಸಲು ನಮ್ಮ ಸರ್ಕಾರವು ಬದ್ಧವಾಗಿದೆ. ಈ ನಿಟ್ಟಿನಲ್ಲಿ, ನಗರದ ಪ್ರಮುಖ 75 ಜಂಕ್ಷನ್ಗಳ ಅಭಿವೃದ್ಧಿಗಾಗಿ 100 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಶೇ. 40ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಸುಲಭ ಸಂಚಾರಕ್ಕೆ ಅನುವು ಮಾಡಿಕೊಡುವುದು ಮತ್ತು ಉತ್ತಮ ಮೂಲಸೌಕರ್ಯ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

