ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಛತ್ತೀಸ್ ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಮಂಗಳವಾರ ಸಂಜೆ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಡಿಕ್ಕಿ ಹೊಡೆದ ಪರಿಣಾಮವಾಗಿ 11 ಜನರು ಮೃತಪಟ್ಟಿದ್ದು,
20 ಜನರು ಗಾಯಗೊಂಡಿರುವ ದುರದೃಷ್ಟಕರ ಸುದ್ದಿ ತಿಳಿದು ದುಃಖವಾಯಿತು. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳುವಂತಾಗಲಿ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ವಿಜ್ಞಾನ ತಂತ್ರಜ್ಞಾನಗಳ ಬಳಕೆ ಹೆಚ್ಚುತ್ತಾ ಹೋದರೂ ಅಪಘಾತಗಳ ಸಂಖ್ಯೆ ಇಳಿಮುಖವಾಗದಿರುವುದು ಕಳವಳಕಾರಿ. ಕೇಂದ್ರ ಸರಕಾರ ಹಾಗೂ ರೈಲ್ವೆ ಇಲಾಖೆ ಪರಿಣಿತರ ಸಲಹೆಗಳನ್ನು ಪಡೆದು ಸುರಕ್ಷತಾ ಕ್ರಮಗಳನ್ನು ಬಲಪಡಿಸಿ ಮುಂಬರುವ ದಿನಗಳಲ್ಲಿ ಇಂತಹ ಅಪಘಾತಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಪಾಟೀಲ್ ಆಗ್ರಹ ಮಾಡಿದ್ದಾರೆ.

