ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾರ್ಚ್ 24ರಂದು ನಡೆದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ–1ರ ಗಣಿತ ವಿಷಯದ ಪರೀಕ್ಷೆಗೆ ಒಟ್ಟು 22,601 ವಿದ್ಯಾರ್ಥಿಗಳು ಹಾಜರಾಗಿದ್ದು, 1108 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯಲ್ಲಿ ಗಣಿತ ವಿಷಯದ ಪರೀಕ್ಷೆಗೆ 23,709 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಚಳ್ಳಕೆರೆ ತಾಲ್ಲೂಕಿನಲ್ಲಿ 4,970 ವಿದ್ಯಾರ್ಥಿಗಳು, ಚಿತ್ರದುರ್ಗ–6,442, ಹಿರಿಯೂರು–3,442, ಹೊಳಲ್ಕೆರೆ–2,625, ಹೊಸದುರ್ಗ–2,921 ಹಾಗೂ
ಮೊಳಕಾಲ್ಮುರು–2,201 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 22,601 ವಿದ್ಯಾರ್ಥಿಗಳು ಹಾಜರಾಗಿ, 1108 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ 82 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.