ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೇಶದ ಕೈಗಾರಿಕೆಗಳನ್ನು ಸಶಕ್ತಿಕರಣಗೊಳಿಸುವತ್ತ ದೃಢ ಸಂಕಲ್ಪ ಕೈಗೊಂಡಿದ್ದಾರೆ ಎಂದು ಜೆಡಿಎಸ್ ಹರ್ಷ ವ್ಯಕ್ತಪಡಿಸಿದೆ.
ಮೊದಲ ಪ್ರಯತ್ನದ ಫಲವಾಗಿ ಆಂಧ್ರ ಪ್ರದೇಶ ರಾಜ್ಯದ ವಿಶಾಖಪಟ್ಟಣದ RINL (ವೈಜಾಗ್ ಸ್ಟೀಲ್ ಪ್ಲಾಂಟ್) ಪುನಶ್ವೇತನಕ್ಕಾಗಿ 11,440 ಕೋಟಿ ಪ್ಯಾಕೇಜ್‌ಗೆ ಕೇಂದ್ರದ NDA ಮೈತ್ರಿ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ ಜೆಡಿಎಸ್ ತಿಳಿಸಿದೆ.
ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಲಿಷ್ಠ, ಸ್ವಾವಲಂಬಿ “ವಿಕಸಿತ ಭಾರತ”ವನ್ನು ನಿರ್ಮಿಸಲು ವಿಶೇಷ ಕಾಳಜಿ ವಹಿಸಿ ಶ್ರಮಿಸುತ್ತಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅಂದು ಕೊಟ್ಟ ಮಾತನ್ನು ಇಂದು ಉಳಿಸಿಕೊಂಡು ನುಡಿದಂತೆ ನಡೆದಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ಆಂಧ್ರದ ವಿಶಾಖಪಟ್ಟಣದಲ್ಲಿರುವ ವೈಜಾಗ್‌ಉಕ್ಕು ಕಾರ್ಖಾನೆಯನ್ನು ಖಾಸಗಿಕರಣಗೊಳಿಸುವುದಿಲ್ಲ, (RINL) ಅನ್ನು ನಾವೇ ಪುನಶ್ಚೇತನಗೊಳಿಸುತ್ತೇವೆ ಎಂದು ಹೇಳಿದಂತೆ 11,440 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುತ್ತಿದೆ.
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರದ NDA ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮೋದಿಯವರ ಮಾರ್ಗದರ್ಶನದಲ್ಲಿ ಬಲಿಷ್ಠ, ಸ್ವಾವಲಂಬಿ ಭಾರತವನ್ನು ನಿರ್ಮಿಸುವ ದೃಢ ಹೆಜ್ಜೆ ಇದಾಗಿದೆ ಎಂದು ಜೆಡಿಎಸ್ ತಿಳಿಸಿದೆ.