ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಇದೇ ಜೂನ್ 21ರಂದು ಬೆಳಿಗ್ಗೆ 7 ಗಂಟೆಯಿಂದ ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಯೋಗ ಸಂಗಮ–11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು,
ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಎಲ್ಲ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ತಿಳಿಸಿದ್ದಾರೆ.