ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದ ಪರಿಣಾಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 90 ಬಾಣಂತಿಯರು ಹಾಗೂ 1294 ಶಿಶುಗಳು ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಸಚಿವ ದಿನೇಶ್ ಗುಂಡೂರಾವ್ ಅವರ ಕಡೆಗಣನೆಯಿಂದ ಆರೋಗ್ಯ ಇಲಾಖೆಗೆ ಅನಾರೋಗ್ಯ ಆವರಿಸಿದೆ. ವೈದ್ಯರ ಕೊರತೆ, ಸೂಕ್ತ ಚಿಕಿತ್ಸೆ ದೊರೆಯದೆ ಬಾಣಂತಿಯರು ಮತ್ತು ಶಿಶುಗಳು ಸಾವನ್ನಪ್ಪಿರುವುದು ಇಲಾಖೆ ವೈಫಲ್ಯಕ್ಕೆ ಸಾಕ್ಷಿ.
ಬೇಡದ ವಿಷಯಗಳಲ್ಲಿ ಮೂಗು ತೂರಿಸುವುದರಲ್ಲೇ ಮಗ್ನರಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೇಜವಾಬ್ದಾರಿತನದಿಂದ ಕಲಬುರಗಿ ಜಿಲ್ಲೆಯಲ್ಲಿ 28 ಬಾಣಂತಿಯರು ಹಾಗೂ 211 ಶಿಶುಗಳು ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಅಸಮರ್ಥ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌ಅವರನ್ನು ಕೈಬಿಟ್ಟು, ಆರೋಗ್ಯ ಇಲಾಖೆಗೆ ಚೈತನ್ಯ ನೀಡಿ ಎಂದು ಬಿಜೆಪಿ ತಾಕೀತು ಮಾಡಿದೆ.

