ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳು ಕ್ಷೇಮವಾಗಿ ನವದೆಹಲಿಗೆ ಮುಟ್ಟಿದ್ದು, ನಾಳೆ ಸಂಜೆ ಬೆಂಗಳೂರು ತಲುಪಲಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಇಡೀ ರಾಷ್ಟ್ರವು ಸವಾಲಿನ ಪರಿಸ್ಥಿತಿಯಲ್ಲಿರುವಾಗಲೂ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸ್ಪಷ್ಟ ಮಾರ್ಗದರ್ಶನ, ದಿಟ್ಟ ಕ್ರಮಗಳಿಂದ ಈ ಕಾರ್ಯಾಚರಣೆ ಸಾಧ್ಯವಾಗಿದೆ.
ಶ್ರೀನಗರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರದ ಅಧಿಕಾರಿಗಳು, ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು @MHI_GoI & @SteelMinIndia ಸಚಿವಾಲಯದ ಅಧಿಕಾರಿಗಳು ಶ್ರಮಿಸಿದ್ದು, ಎಲ್ಲರನ್ನೂ ಕುಮಾರಸ್ವಾಮಿ ಅವರು ಶ್ಲಾಘಿಸಿದ್ದಾರೆ.