ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀನಗರದ ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಬಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಅವರನ್ನ ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ರಕ್ಷಣೆಗಾಗಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಅಗತ್ಯ ಕ್ರಮ ವಹಿಸಿ, ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹಾಗೂ “ಇಡೀ ದೇಶವು ಸವಾಲಿನ ಪರಿಸ್ಥಿತಿಯಲ್ಲಿ ಇರುವಾಗ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ಮಾರ್ಗದರ್ಶನದಿಂದ ಮಾತ್ರ ಇದೆಲ್ಲಾ ಸಾಧ್ಯವಾಗಿದೆ ಎಂದು ನಿಖಿಲ್ ಕುಮಾರ್ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಇಡೀ ಕೇಂದ್ರ ಸರ್ಕಾರದ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು ಸಚಿವಾಲಯದ ಅಧಿಕಾರಿಗಳನ್ನು ನಾನು ಶ್ಲಾಘಿಸುತ್ತೇನೆ. ಅವರಿಗೆ ನನ್ನ ವಿಶೇಷ ಧನ್ಯವಾದಗಳು.
ಇನ್ನು ನನ್ನ ಜೊತೆ ಸತತವಾಗಿ ವಿದ್ಯಾರ್ಥಿಗಳನ್ನ ವಾಪಾಸ್ ಕರೆತರುವುದಕ್ಕೆ ಸಹಕರಿಸಿದ ನಮ್ಮ ತಂಡಕ್ಕೆ ನಾನು ಆಭಾರಿ ಆಗಿದ್ದೇನೆಂದು ನಿಖಿಲ್ ಕುಮಾರ್ ಹೇಳಿದರು.