ಚಂದ್ರವಳ್ಳಿ ನ್ಯೂಸ್, ತುಮಕೂರು:
ಪಾವಗಡ ತಾಲ್ಲೂಕು ಮಂಗಳವಾಡ ಗ್ರಾಮದ ಸುಮಾರು ೧೪ ವರ್ಷದ ಪ್ರದೀಪ ಎಂಬ ಬಾಲಕನು ಜನವರಿ ೮ ರಂದು ಶಾಲೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವನು ಮರಳಿ ಬಾರದೆ ಕಾಣೆಯಾಗಿದ್ದಾನೆ ಎಂದು ಈತನ ತಂದೆ ಜಯರಾಮ್ ಅವರು ಅರಸೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾದ ಬಾಲಕನು ತಿರುಮಲ ರಾಘವೇಂದ್ರ ಪ್ರೌಢಶಾಲೆಯಲ್ಲಿ ಓದುತ್ತಿದ್ದು, ೫.೫ ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಅಂಗಿ, ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿದ್ದನು.
ಈತನ ಬಗ್ಗೆ ಸುಳಿವು ಸಿಕ್ಕಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ ಅಥವಾ ಮೊ.ಸಂ.೯೦೦೮೭೮೮೫೮೬ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.