ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ 16.745 ಕಿ.ಮೀ ಉದ್ದದ ಅವಳಿ ಭೂಗತ ಸುರಂಗ ಮಾರ್ಗ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಭೆ ನಡೆಸಿದರು.

- Advertisement - 

ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ 17,780 ಕೋಟಿ ರೂ. ವೆಚ್ಚದ 16.745 ಕಿ.ಮೀ ಉದ್ದದ ಅವಳಿ ಭೂಗತ ಸುರಂಗ ಮಾರ್ಗ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಡಿಸಿಎಂ ತಿಳಿಸಿದರು.

- Advertisement - 

ಈ ನಿಟ್ಟಿನಲ್ಲಿ ಬೆಂಗಳೂರಿನ ಸಂಚಾರ ಸಮಸ್ಯೆಗೆ ಕಡಿವಾಣ ಹಾಕಲು ಈ ಸುರಂಗ ಮಾರ್ಗದ ಯೋಜನೆಗಳ ರೂಪುರೇಷೆಗಳ ಕುರಿತು ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

 

- Advertisement - 

 

Share This Article
error: Content is protected !!
";