ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂಕಪಟ್ಟಿ ತಿದ್ದುಪಡಿ ಗೆ 100, 200 ಶುಲ್ಕ ವಿಧಿಸುವುದಕ್ಕೆ ವಿರೋಧವಿಲ್ಲ. ಆದರೆ, ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಅಂಕಪಟ್ಟಿ ತಿದ್ದುಪಡಿಗೆ ಬರೋಬ್ಬರಿ 1600 ನಿಗದಿ ಮಾಡಿರುವುದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ ಎಂದು ಬಿಜೆಪಿ ನಾಯಕ ಬಸನಗೌಡ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ, ಕಾರ್ಮಿಕರ, ದಿನಗೂಲಿ, ಆಟೋ ರಿಕ್ಷಾ, ಮನೆಗೆಲಸ ಮಾಡುವರ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವರ ಮಕ್ಕಳಿಗೆ ಇದು ಸಾಕಷ್ಟು ತೊಂದರೆಯಾಗುತ್ತದೆ. ಮುಖ್ಯ ಮಂತ್ರಿಗಳು ಕೂಡಲೇ ಈ ಪ್ರಸ್ತಾವನೆಯನ್ನು ತಿರಸ್ಕರಿಸಿ ಕೈಗೆಟುಕುವ ಶುಲ್ಕವನ್ನು ನಿಗದಿ ಮಾಡಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.