ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಸುಮಾರು 2 ಲಕ್ಷ 76 ಸಾವಿರ ಹುದ್ದೆಗಳು ಖಾಲಿ ಇದ್ದರೂ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸದೆ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
- ಇತ್ತೀಚೆಗಷ್ಟೇ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ಯುವಕನೊಬ್ಬ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ, ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು.
ಈಗ ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.
ನಿರುದ್ಯೋಗಿ ಯುವಕರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ, ಬೀದಿಗಿಳಿದು ಮಾಡುತ್ತಿದ್ದರೂ ಸಿದ್ದರಾಮಯ್ಯ ಸರ್ಕಾರ ಮಾತ್ರ ಕ್ಯಾರೇ ಎನ್ನುವಂತೆ ಕುಂಭಕರ್ಣನ ನಿದ್ದೆಯಲ್ಲಿದೆ ಎಂದು ಅಶೋಕ್ ಟೀಕಿಸಿದ್ದಾರೆ.

