ಚಂದ್ರವಳ್ಳಿ ನ್ಯೂಸ್, ತುಮಕೂರು:
ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಾಪುರದಲ್ಲಿರುವ ತನ್ನ ಮನೆಯಿಂದ ಸುಮಾರು ೨೦ ವರ್ಷದ ಲಕ್ಷ್ಮಿ ಎಂಬ ಮಹಿಳೆ ಆಗಸ್ಟ್ ೨೭ ರಿಂದ ಕಾಣೆಯಾಗಿದ್ದಾಳೆ ಎಂದು ಪತಿ ರಮೇಶ್ ಕುಮಾರ್ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾದ ಮಹಿಳೆಯು ೫ ಅಡಿ ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಹೊಂದಿದ್ದು, ನೀಲಿ ಬಣ್ಣದ ಚೂಡಿದಾರ ಮತ್ತು ಕ್ರೀಂ ಕಲರ್ ವೇಲ್ ಧರಿಸಿರುತ್ತಾಳೆ. ಕನ್ನಡ ಮಾತನಾಡಲು ಬರುವ ಈಕೆಯ ಬಗ್ಗೆ ಸುಳಿವು ಸಿಕ್ಕವರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್ಸ್‌ಸ್ಪೇಕ್ಟರ್ ತಿಳಿಸಿದ್ದಾರೆ.