![](https://www.chandravallinews.com/wp-content/uploads/2023/12/WhatsApp-Image-2023-12-06-at-10.45.55-PM-1024x649.jpeg)
i
ಯುವತಿಯರಿಗಾಗಿ ಉಚಿತ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಾರ ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಜಿಲ್ಲೆಯ 18 ರಿಂದ 45 ವರ್ಷ ವಯೋಮಿತಿಯುಳ್ಳವರು ಡಿಸೆಂಬರ್ 13, ಬುಧವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್ 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ತರಬೇತಿಯು 45 ದಿನಗಳ ಕಾಲಾವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊ.8971308776, 7760313833, 9483652240 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.