![](https://www.chandravallinews.com/wp-content/uploads/2024/05/WhatsApp-Image-2023-02-08-at-9.50.56-AM-4.jpeg)
i
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಆಶಾಕಿರಣ ಸಂಸ್ಥೆ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುವುದು. ಆಸಕ್ತಿಯುಳ್ಳ ವಿದ್ಯಾರ್ಥಿಗಳು ವಿ.ಪಿ ಬಡಾವಣೆ ಮುಖ್ಯ ರಸ್ತೆ, ಡಿಸಿಬಿ ಬ್ಯಾಂಕ್ ಕೆಳಭಾಗದಲ್ಲಿರುವ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಜೂನ್ 20 ರೊಳಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗಾಗಿ 9449003334, 9449052255 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.