![](https://www.chandravallinews.com/wp-content/uploads/2024/06/sp-meena-.jpeg)
i
ಜೂನ್ 26ರಂದು ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಎಸ್.ಜೆ.ಎಂ ತಾಂತ್ರಿಕ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 26ರಂದು ಬೆಳಿಗ್ಗೆ 11ಕ್ಕೆ ನಗರದ ಎಸ್.ಜೆ.ಎಂ ತಾಂತ್ರಿಕ ಮಹಾವಿದ್ಯಾಲಯ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ “ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ – 2024 ಕಾರ್ಯಕ್ರಮ ಆಯೋಜಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕಾರ್ಯಕ್ರಮ ಉದ್ಘಾಟಿಸುವರು. ಎಸ್.ಜೆ.ಎಂ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಪಿ.ಬಿ. ಭರತ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಡಿ.ಎಂ.ಅಭಿನವ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಬಿ.ವಿ.ಗಿರೀಶ್, ಎಸ್.ಜೆ.ಎಂ ತಾಂತ್ರಿಕ ಮಹಾವಿದ್ಯಾಲಯ ಎನ್.ಎಸ್,ಎಸ್ ಸಂಚಾಲಕ ಈ.ನಿರಂಜನ್ ಭಾಗವಹಿಸುವರು.
ಮನೋವೈದ್ಯ ಡಾ.ಆರ್.ಮಂಜುನಾಥ್ ಅವರು ಮಾದಕ ವಸ್ತುಗಳ ವ್ಯಸನ ಮತ್ತು ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡುವರು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ತಿಳಿಸಿದ್ದಾರೆ.