![](https://www.chandravallinews.com/wp-content/uploads/2024/06/MLA-Sudhakar-3.jpeg)
i
ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 27ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ನಾಡಪ್ರಭು ಕೆಂಪೇಗೌಡ” ಜಯಂತಿ ಆಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಪಿ.ಚೇತನ್, ಕಾರ್ಯದರ್ಶಿ ಎಸ್.ಜಗನ್ನಾಥ್, ಗೌರವಾಧ್ಯಕ್ಷ ಪ್ರೊ.ಎನ್.ಈರಣ್ಣ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲೆಯ ಒಕ್ಕಲಿಗರ ಸಂಘದ ಮುಖಂಡರು, ಗಣ್ಯರು ಭಾಗವಹಿಸುವರು. ನಿವೃತ್ತ ಪ್ರಾಂಶುಪಾಲ ಮೀರಾಸಾಬಿಹಳ್ಳಿ ಡಾ.ಸಿ.ಶಿವಲಿಂಗಪ್ಪ ಉಪನ್ಯಾಸ ನೀಡುವರು. ಹಿರಿಯೂರಿನ ತ್ರಿವೇಣಿ ಮತ್ತು ತಂಡದವರು ಗೀತಗಾಯನ ನಡೆಸಿಕೊಡುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.