![](https://www.chandravallinews.com/wp-content/uploads/2024/06/b8683d9e-2e6b-41dc-a020-afc5591dd8cf-5.jpg)
i
ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25ನೇ ಶೈಕ್ಷಣಿಕ ಸಾಲಿಗೆ ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಜುಲೈ 15 ರವರೆಗೆ ಮ್ಯಾನ್ಯುಯಲ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನಂತರ ಆನ್ಲೈನ್ನಲ್ಲಿ ಸಲ್ಲಿಸಲು ಅವಕಾಶ ನೀಡಲಾಗುವುದು.
ಅರ್ಜಿಗಳನ್ನು ಆಯಾ ವಿದ್ಯಾರ್ಥಿನಿಲಯಗಳಿಗೆ ಅಥವಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿsಸಬಹುದಾಗಿದೆ ಎಂದು ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.