![](https://www.chandravallinews.com/wp-content/uploads/2024/06/WhatsApp-Image-2024-06-27-at-6.22.21-PM-1-1024x681.jpeg)
i
ಕೆಂಪೇಗೌಡರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವ ಸಮಾರಂಭದ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಈ ವೇಳೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಶಾಸಕ ನಾಗರಾಜ್ ಯಾದವ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಉಮಾಶಂಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.