![](https://www.chandravallinews.com/wp-content/uploads/2024/06/Minister-K.J.-George-3-1024x768.jpg)
i
ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್..
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದು ಬೆಳಗ್ಗೆ ವಿಧಾನಸೌಧದ ಮುಂಭಾಗದಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ – 2024 ಅನ್ನು ಉದ್ಘಾಟಿಸಿದರು.
ನಂತರ ವಿಧಾನಸೌಧದಿಂದ ಕೆ.ಆರ್.ವೃತ್ತದವರೆಗೆ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು.
ಈ ಕಾರ್ಯಕ್ರಮವು ವಿದ್ಯುತ್ ಸುರಕ್ಷತಾ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ವಿದ್ಯುತ್ ಅಪಘಾತಗಳನ್ನು ತಪ್ಪಿಸುವ ಗುರಿಯನ್ನು ಹೊಂದಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸರ್ಕಾರದ ಮುಖ್ಯ ಪರಿವೀಕ್ಷಕರಾದ ತೀತಿರಾ.ಎನ್.ಅಪ್ಪಚ್ಚು, ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.