![](https://www.chandravallinews.com/wp-content/uploads/2024/06/WhatsApp-Image-2024-06-27-at-7.31.59-PM-1024x518.jpeg)
i
ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯನವರು ಸಿಎಂ ಹುದ್ದೆ ಬಿಟ್ಟು ಕೊಡಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಬದಲಾವಣೆ ಕುರಿತಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಮನವಿ ಮಾಡಿರುವ ಪ್ರಸಂಗ ಗುರುವಾರ ಬೆಂಗಳೂರಿನಲ್ಲಿ ಜರುಗಿದೆ.
ಮುಖ್ಯಮಂತ್ರಿ ಹುದ್ದೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯನವರಿಗೆ ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷರಾದ ಚಂದ್ರಶೇಖರಸ್ವಾಮೀಜಿ ಮನವಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಸಮಾರಂಭದಲ್ಲಿ ಚಂದ್ರಶೇಖರ ಸ್ವಾಮೀಜಿ ಅವರು, ಸಿದ್ದರಾಮಯ್ಯನವರು ಸೇರಿದಂತೆ ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇನ್ನೂ ಕೂಡಿಬಂದಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ಅದಾಗಲೇ ನಿಮಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದೀರಿ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಎಂದು ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿರುವುದು ಸಿದ್ದರಾಮಯ್ಯ ಅವರ ಇರಿಸು ಮುರುಸಿಗೂ ಕಾರಣವಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ವಿಷಯ ಪ್ರಸ್ತಾಪ ಮಾಡದೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ.