![](https://www.chandravallinews.com/wp-content/uploads/2024/06/WhatsApp-Image-2024-06-23-at-6.11.22-PM-7-1024x607.jpeg)
i
ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25ನೇ ಶೈಕ್ಷಣಿಕ ಸಾಲಿಗೆ ಹೊಸದುರ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ಜೂನ್ 30 ರೊಳಗೆ ಆನ್ಲೈನ್ sw.kar.nic.inಹಾಗೂ ಮ್ಯಾನ್ಯುಯಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.