![](https://www.chandravallinews.com/wp-content/uploads/2024/06/b8683d9e-2e6b-41dc-a020-afc5591dd8cf-6.jpg)
i
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25ನೇ ಸಾಲಿನ ಪಿಯುಸಿ ನಂತರದ ವಿವಿಧ ಕೋರ್ಸುಗಳಲ್ಲಿ ಹಾಗೂ ಪದವಿಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಥಿಗಳು ಎಸ್.ಹೆಚ್.ಪಿ ಪೋರ್ಟಲ್ ಜಾಲಾತಾಣ www.tw.kar.nic ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ ನೇರವಾಗಿ ಸಂಬಂಧಿಸಿದ ಮೇಲ್ವಿಚಾರಕರು ಅಥವಾ ಅಗತ್ಯ ಪೂರಕ ಎಲ್ಲಾ ದಾಖಲೆಗಳೊಂದಿಗೆ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-226659 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.