i
ಗುಡ್ಡ ಕುಸಿತ: ಹೆದ್ದಾರಿ ಬಂದ್
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಹೊಸನಗರ ತಾಲೂಕಿನ ನಗರ ಹೋಬಳಿಯ ಸಮಗೋಡು ಸಮೀಪ ಭಾರೀ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿದ ಪರಿಣಾಮ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ-766c ಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಹೊಸನಗರ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಅವಘಡ ಸೃಷ್ಟಿಸಿದೆ. ಜೆಸಿಬಿ ಯಂತ್ರ ಬಳಸಿ ಮಣ್ಣು ತೆರೆಯುವ ಕಾರ್ಯ ಆರಂಭವಾಗಿದೆ. ಮಳೆಯಿಂದ ಮಣ್ಣು ತೆಗಿಯುವ ಕಾರ್ಯಕ್ಕೆ ಅಡ್ಡಿಯಾಗಿದೆ.