2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಮುಕ್ತಾಯ ಸಮಾರಂಭ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಲಾವಣ್ಯ ವಿದ್ಯಾ ಸಂಸ್ಥೆಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಮುಕ್ತಾಯ ಸಮಾರಂಭ ನಡೆಯಿತು.

ಸಂಸ್ಥೆಯ ಗೌರವ ಕಾರ್ಯದರ್ಶಿ ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ವಿಶ್ವಾಸ್ ಹನುಮಂತೇಗೌಡ ರವರು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಾಗಬೇಕು ಮತ್ತು ಮಾನಸಿಕ ಸದೃಢತೆ ಉತ್ತಮ ಪಡಿಸಿಕೊಳ್ಳಬೇಕು.

- Advertisement - 

ಏಕೆಂದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಒತ್ತಡವನ್ನು ನಿವಾರಿಸುವ ಸಾಮರ್ಥ್ಯ ತುಂಬಾ ಕಡಿಮೆ ಇದೆ. ಇದರಿಂದಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದ ಯುವ ಜನಾಂಗದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಹೇಳಿದರು

ಪ್ರಾಂಶುಪಾಲ ಎಂ. ಸಿ. ಮಂಜುನಾಥ್ ಮಾತನಾಡಿ ಮುಂದಿನ ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಆದುದರಿಂದ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸುವ ಕಡೆ ಗಮನಹರಿಸಿ ಎಂದು ಹೇಳಿದರು.

- Advertisement - 

ಕಾರ್ಯಕ್ರಮದಲ್ಲಿ ಬಿಎಡ್ ಪ್ರಾಂಶುಪಾಲರಾದ ಪ್ರೊ.ಜಿ. ಕೃಷ್ಣಮೂರ್ತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅರುಣ್ ಕುಮಾರ್ ಸೇರಿದಂತೆ ಸಂಸ್ಥೆಯ  ಉಪನ್ಯಾಸಕರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 

 

Share This Article
error: Content is protected !!
";