ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲ್ಲೂಕಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ R. L. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ 20ನೇ ವರ್ಷದ ಪದವೀಧರರಿಗೆ ಪದವಿ ಪ್ರಧಾನ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಗಣ್ಯರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಪದವೀಧರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ನಂತರ ಕಾಲೇಜಿನ ಉಪಾಧ್ಯಕ್ಷ ಜೆ ರಾಜೇಂದ್ರ ಮಾತನಾಡಿ ನಮ್ಮ ವಿದ್ಯಾಸಂಸ್ಥೆಯು 2001ರಲ್ಲಿ ಆರಂಭವಾಗಿದ್ದು ನಿರಂತರ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಸಹಕಾರಿಯಾಗಿರುವುದು ಶ್ಲಾಘನೀಯ. ಈಗಾಗಲೇ ನಮ್ಮ ವಿದ್ಯಾಸಂಸ್ಥೆಯಿಂದ 7000ಕ್ಕೂ ಅಧಿಕ ವಿದ್ಯಾರ್ಥಿಗಳು ಪದವಿ ಪಡೆದು ಸಮಾಜದ ಮುಖ್ಯವಾಹಿನಿಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.
ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಉದ್ಯಮಿಗಳಾಗಿ ಸಾವಿರಾರು ಕಾರ್ಮಿಕರಿಗೆ ಆಧಾರವಾಗಿ ಶ್ರಮಿಸುತ್ತಿರುವುದು ನಮ್ಮ ಶಿಕ್ಷಣ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಆರ್ ಎಲ್ ಜಾಲಪ್ಪನವರ ಆಶಯದಂತೆ ಇಂದಿಗೂ ನಮ್ಮ ಸಂಸ್ಥೆ ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸುತ್ತಿದ್ದು. ಇಂದು 20ನೇ ವರ್ಷದ ಪದವಿ ಪ್ರಧಾನ ಕಾರ್ಯಕ್ರಮವನ್ನು ಹೆಮ್ಮೆಯಿಂದ ಆಚರಿಸಲಾಗುತ್ತಿದೆ ಎಂದರು.
ನಮ್ಮ R. L. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು AICTE, ನವದೆಹಲಿಯಿಂದ ಗುರುತಿಸಲ್ಪಟ್ಟಿದೆ, “A” ಗ್ರೇಡ್‌ನೊಂದಿಗೆ NAAC ನಿಂದ ಮಾನ್ಯತೆ ಪಡೆದಿದ್ದು ಉತ್ತಮ ವಿದ್ಯಾಭ್ಯಾಸ ಕೊಡುವಲ್ಲಿ ಮುಂಚೂಣಿಯಲಿದೆ. ಈ ಬಾರಿ ಪದವೀಧರರಾಗಿರುವ ವಿದ್ಯಾರ್ಥಿಗಳು ಸಮಾಜಕ್ಕೆ ಮತ್ತಷ್ಟು ಕೊಡುಗೆ ಕೊಡುವಂತಾಗಲಿ ಎಂದು ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
20ನೇ ಪದವಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ನಿರ್ದೇಶಕ ದಿನೇಶ್ ಕುಮಾರ್ ಶರ್ಮಾ,ಪಾತ್‌ಫೈಂಡರ್ ಕನ್ಸಲ್ಟಿಂಗ್ ಸರ್ವಿಸಸ್ ಸಂಸ್ಥಾಪಕರಾದ ಸಾಕ್ಷಿ ಶರ್ಮಾ ಕಾಲೇಜಿನ ಅಧ್ಯಕ್ಷ ಜಿ.ಎಚ್. ನಾಗರಾಜ, ಕಾರ್ಯದರ್ಶಿ ಕೆ.ಜಿ. ಹನುಮಂತ ರಾಜು,ಮಾನವ ಸಂಪನ್ಮೂಲ ಅಧಿಕಾರಿ ಬಾಬುರೆಡ್ಡಿ, ಡಾ ಶ್ರೀನಿವಾಸ್ ರೆಡ್ಡಿ,ರೀ ಸರ್ಚ್ ಕ್ವಾಲಿಟಿ ನಿರ್ದೇಶಕರು ಹಾಗೂ ಉಪ ಪ್ರಾಂಶುಪಾಲರು ಡಾ. ಶಿವಪ್ರಸಾದ್, ಡಾ. ಸುನಿಲ್ ಕುಮಾರ್ ಆರ್ ಎಂ ಮುಖ್ಯಸ್ಥರು ಕಂಪ್ಯೂಟರ್ ವಿಭಾಗ, ಟ್ರಸ್ಟಿಗಳು, ನಿರ್ದೇಶಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.