ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್-ಲಾರಿ ನಡುವೆ ಅಫಘಾತ 24 ಮಂದಿ ಸಾವು

News Desk

ಚಂದ್ರವಳ್ಳಿ ನ್ಯೂಸ್, ಹೈದರಾಬಾದ್:
ಬಸ್ ಮತ್ತು ಜೆಲ್ಲಿಕಲ್ಲು ತುಂಬಿದ್ದ ಲಾರಿ ನಡುವೆ ನಡೆದ ಅಫಘಾತದಲ್ಲಿ 24 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿ ಮೃತ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮೃತರ ಕುಟಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50,000 ರೂ ಪರಿಹಾರ ನೀಡುವುದಾಗಿ ಮೋದಿ ಅವರು ಘೋಷಿಸಿದ್ದಾರೆ.

- Advertisement - 

ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದ ಮಿರ್ಜಾಗುಡ ಗ್ರಾಮದ ಬಳಿ ಸಂಭವಿಸಿದ ಘಟನೆ ವೇಳೆ ಬಸ್ ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್ ಪಲ್ಟಿಯಾದ ಪರಿಣಾಮ ಜಲ್ಲಿಕಲ್ಲಿನ ಕೆಳಗೆ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ 24 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement - 

ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಕ್ಷಣವೇ ಅಪಘಾತದ ಸ್ಥಳಕ್ಕೆ ಹೋಗಿ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಹೈದರಾಬಾದ್‌ಗೆ ಸ್ಥಳಾಂತರಿಸಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡುವಂತೆ ಸಿಎಸ್ ಮತ್ತು ಡಿಜಿಪಿಗೆ ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.

ನಾಗರಿಕರು ಸಹಾಯ ಅಥವಾ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳಲ್ಲಿ ನಿಯಂತ್ರಣ ಕೊಠಡಿ ಸಂಪರ್ಕಿಸಬಹುದಾಗಿದೆ: 9912919545, 9440854433.

 

 

 

Share This Article
error: Content is protected !!
";