ಎರಡೂವರೆ ವರ್ಷಗಳಲ್ಲಿ 2,422 ಮಂದಿ ರೈತರು ಆತ್ಮಹತ್ಯೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ 2,422 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಸಿದ್ದರಾಮಯ್ಯ ಸರ್ಕಾರಕ್ಕೆ ನಾಡಿನ ರೈತರ ಬಗ್ಗೆ ಕನಿಷ್ಠ ಕಾಳಜಿ ಇಲ್ಲ ಎನ್ನುವುದನ್ನು ಅಂಕಿ ಅಂಶಗಳೇ ಸಾಬೀತುಪಡಿಸುತ್ತಿದೆ.  

- Advertisement - 

ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತಾಪಿವರ್ಗ ಬೆಳೆ ನಷ್ಟ, ಸಾಲದ ಸುಳಿಗೆ ಸಿಲುಕಿ ಸಾವಿನ ದಾರಿ ಹಿಡಿಯುತ್ತಿದ್ದಾರೆ, ಅನ್ನದಾತರ ಆತ್ಮಹತ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಲೇ ಇದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ರೈತರ ಆತ್ಮವಿಶ್ವಾಸ ಹೆಚ್ಚಳಕ್ಕೆ ಹಾಗೂ ಆತ್ಮಹತ್ಯೆ ತಡೆಗೆ ಕಾಂಗ್ರೆಸ್ ಸರ್ಕಾರವಾಗಲಿ, ಕೃಷಿ ಸಚಿವ ಚೆಲುವರಾಯಸ್ವಾಮಿ ಯಾವುದೇ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸದಿರುವುದು ದುರಂತ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

- Advertisement - 

 

Share This Article
error: Content is protected !!
";