ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ, ಸರಸ್ವತಿ ಕಾನೂನು ಕಾಲೇಜು, ಎಸ್.ಜೆ.ಎಂ ಕಾನೂನು ಕಾಲೇಜು, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಇದೇ ಡಿ.24ರಂದು ಬೆಳಿಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
“ಗ್ರಾಹಕರ ನ್ಯಾಯಕ್ಕಾಗಿ ವರ್ಚುವಲ್ ವಿಚಾರಣೆಗಳು ಮತ್ತು ಡಿಜಿಟಲ್ ಹಾದಿ” ಎಂಬ ಘೋಷವಾಕ್ಯದೊಂದಿಗೆ ದಿನಾಚರಣೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ್ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಮತ್ತು 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಚೈತ್ರಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಹೆಚ್.ಎನ್.ಮೀನಾ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಸರಸ್ವತಿ ಕಾನೂನು ಕಾಲೇಜು ಪ್ರಾಂಶುಪಾಲೆ
ಡಾ.ಎಂ.ಹೆಚ್.ಸುಧಾದೇವಿ, ಎಸ್.ಜೆ.ಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ದಿನೇಶ್ ಭಾಗವಹಿಸುವರು. ಪ್ರಧಾನ ಕಾನೂನು ನೆರವು ಅಭಿರಕ್ಷಕ ಎಸ್.ವಿಜಯ್ ಕುಮಾರ್ ಅವರು “ಗ್ರಾಹಕರ ಸಂರಕ್ಷಣಾ ಕಾಯ್ದೆ” ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.