ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ)
ಲಾರಿ ಮಾಲೀಕರು ಹಾಗೂ ವಿವಿಧ ಸಂಘಗಳು ಏ.14 ರಿಂದ ಅನಿರ್ಧಿಷ್ಟ ಮುಷ್ಕರಕ್ಕೆ ಕರೆ ನೀಡಿದ್ದು, ಮುಷ್ಕರದ ಅವಧಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ 24X7 ಮಾದರಿಯಲ್ಲಿ ಸಹಾಯವಾಣಿ ಕಾರ್ಯನಿರ್ವಹಿಸಲಿದೆ.
ಅಗತ್ಯ ಸೇವೆಗಳ ಪೂರೈಕೆಯಲ್ಲಿ ತೊಂದರೆ ಉಂಟಾದರೆ ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 08394 230766 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಈಶ್ವರ ಚವ್ಹಾಣ್ ತಿಳಿಸಿದ್ದಾರೆ.