ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸುತ್ತಿದೆ. ಆರೋಗ್ಯ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಬಾಣಂತಿಯರ ಸಾವಿನ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಲು ಗರ್ಭಿಣಿಯರು ಹೆದರುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಮೃತ ಬಾಣಂತಿಯರ ಬಗ್ಗೆಯೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಮೃತಪಟ್ಟವರಿಗೆ ಪರಿಹಾರ ಒದಗಿಸಲು, ಸಾಂತ್ವನದ ನುಡಿ ಮೂಲಕ ಧೈರ್ಯ ತುಂಬುವ ಕೆಲಸವೂ ಆಗುತ್ತಿಲ್ಲ.
ಸರ್ಕಾರದ ನಿರ್ಲಕ್ಷ್ಯಕ್ಕೆ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಖಂಡನೆ ವ್ಯಕ್ತಪಡಿಸಿ, ಈ ಕೂಡಲೇ ಮೃತ ಬಾಣಂತಿಯರ ಕುಟುಂಬಕ್ಕೆ 25 ಲಕ್ಷ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.