13 ಕಂಪೆನಿಗಳಿಂದ 27 ಸಾವಿರ ಕೋಟಿ ಹೂಡಿಕೆ, ಸಾವಿರಾರು ಉದ್ಯೋಗ ಸೃಷ್ಟಿ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
13 ಕಂಪೆನಿಗಳಿಂದ: ರೂ.27,600+ ಕೋಟಿ ಹೂಡಿಕೆ ಯೋಜನೆಗಳಿಗೆ ಅನುಮೋದನೆ | 8,700+ ಉದ್ಯೋಗಗಳು ಸೃಷ್ಟಿ! ಆಗುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತಮಟ್ಟದ ಅನುಮೋದನಾ ಸಮಿತಿ (#SHLCC) ಸಭೆಯಲ್ಲಿ 11 ಹೊಸ ಹೂಡಿಕೆ ಹಾಗೂ 2 ಹೆಚ್ಚುವರಿ ಸೇರಿದಂತೆ ಸುಮಾರು ರೂ. 27, 607 ಕೋಟಿ ಮೊತ್ತದ ಹೂಡಿಕೆ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಚಿವರು ತಿಳಿಸಿದರು.
ಈ ಯೋಜನೆಗಳು ರಾಜ್ಯಾದ್ಯಂತ ನೂತನ ಕೈಗಾರಿಕೆಗಳ ಸ್ಥಾಪನೆ ಮತ್ತು ಹೆಚ್ಚುವರಿ ಹೂಡಿಕೆಗಳನ್ನು ಒಳಗೊಂಡಿದ್ದು, ಸುಮಾರು 8,700ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
ಇಂದಿನ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಸಂಪುಟದ ಸಹೋದ್ಯೋಗಿಳು, ಸರ್ಕಾರದ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

