ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಉತ್ತೀರ್ಣ ಪ್ರಮಾಣ ಶೇ.12.50ಕ್ಕೆ ಏರಿದೆ.
ಈ ಬಾರಿ ಪರೀಕ್ಷೆ ಬರೆದ 7.10 ಲಕ್ಷ ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಈ ಪೈಕಿ ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಳೆದ ವರ್ಷ ಶೇ.73.45 ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಪಾಸಾದ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಈ ವರ್ಷ 12.50ರಷ್ಟು ಹೆಚ್ಚಳವಾಗಿದ್ದು, ಈ ಬಗ್ಗೆ ಸಂಪೂರ್ಣ ವಿವರವನ್ನ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ.
https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್ ನೋಡಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ಆ್ಯಪ್/ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗಿದೆ. ಈ ವರ್ಷ ಮೊದಲ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕ ಪಟ್ಟಿಯು (Marks Card) ಡಿಜಿಲಾಕರ್ (DigiLocker) ಮೂಲಕ ಇಂದು ಮಧ್ಯಾಹ್ನ 3 ಗಂಟೆಯಿಂದ ಲಭ್ಯವಿದೆ. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

