3 ಕೋಟಿ ಮೌಲ್ಯದ ಡ್ರಗ್ಸ್ ಮತ್ತು ಗಾಂಜಾ ಜಪ್ತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡ್ರಗ್ಸ್​ ಮಾರಾಟ ಮತ್ತು ಸೇವನೆ ವಿರುದ್ಧ ಬೆಂಗಳೂರು ಪೊಲೀಸರು ಸಮರ ಸಾರಿ ಡ್ರಗ್ಸ್​ ಮುಕ್ತ ಬೆಂಗಳೂರು ಮಾಡಲು ಪಣ ತೊಟ್ಟಿದ್ದಾರೆ.

- Advertisement - 

ಬೆಂಗಳೂರಿನ ಅಮೃತಹಳ್ಳಿ ಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್, ಗಾಂಜಾ ಮಾರುತ್ತಿದ್ದ ನೈಜೀರಿಯಾ​ ಮೂಲದ ಪ್ರಜೆ ಪೆಪೆಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement - 

ಬಂಧಿತ ಆರೋಪಿ ಬಳಿ ಇದ್ದ 3 ಕೋಟಿ ಮೌಲ್ಯದ 3 ಕೆಜಿ ಡ್ರಗ್ಸ್ ಮತ್ತು ಗಾಂಜಾವನ್ನು ಅಮೃತಹಳ್ಳಿ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಡ್ರಗ್ಸ್ ಜಾಲ​ ಸಂಪೂರ್ಣ ನಿರ್ನಾಮ: ಪರಮೇಶ್ವರ್​
ಬೆಂಗಳೂರಿನಲ್ಲಿ ಡ್ರಗ್ಸ್ ಕಂಟ್ರೋಲ್ ಮಾಡಿದ್ದೇವೆ. ಅನೇಕ‌ ಕಡೆ ಡ್ರಗ್ಸ್ ಸಿಗುತ್ತಿದೆ. ಈ ಬಗ್ಗೆ ಮಾಹಿತಿ ಇದೆ. ಡ್ರಗ್ಸ್ ಮಾರಾಟ ಸಂಬಂಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯಾ ಇನ್ಸ್​​ಪೆಕ್ಟರ್​ಗಳು ಜವಾಬ್ದಾರಿಯಾಗಿರುತ್ತಾರೆ. ಡ್ರಗ್ಸ್​ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಕೆಲವು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದ್ದರು.

- Advertisement - 

ಯುವಕನ ಬಂಧನ-
11.6 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಗೋವಾ ಪೊಲೀಸರು ಬಂಧಿಸಿದ್ದರು. ಯುವಕನ ಬಳಿ ಇದ್ದ 11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದರು ಎಂದು ವರದಿಯಾಗಿತ್ತು. ಯುವಕ ನೇಪಾಳದಿಂದ ಭಾರತಕ್ಕೆ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದನು. ಈತನ ಚಲನವಲನದ ಮೇಲೆ ರಾಜ್ಯ ಗುಪ್ತಚರ ಇಲಾಖೆ ಕಳೆದೊಂದು ತಿಂಗಳಿನಿಂದ ನಿಗಾ ಇಟ್ಟಿತ್ತು.

ಮಾದಕ ದ್ಯವ್ಯ ತೆಗೆದುಕೊಂಡು ಗೋವಾಕ್ಕೆ ಬಂದಿದ್ದ ಯುವಕನ ಬಗ್ಗೆ ರಾಜ್ಯ ಗುಪ್ತರಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧರಿಸಿ, ಗುಯಿರಿಮ್‌ನಲ್ಲಿ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು. ಪ್ರಕರಣ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಗುಪ್ತಾ ಮಾತನಾಡಿ, ಮಾದಕ ದ್ರವ್ಯ ವಿರುದ್ಧ ನಡೆಸಿದ್ದ ಕಾರ್ಯಾಚರಣೆ ಇತಿಹಾಸದಲ್ಲೇ ಇದುವರೆಗಿನ ಅತಿದೊಡ್ಡ ಮಾದಕ ದ್ರವ್ಯ ಜಪ್ತಿ ಇದಾಗಿದೆ.

ಯುವಕನ ವಿರುದ್ಧ ಎನ್​ಡಿಪಿಎಸ್​ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದರು.ಪ್ರಕರಣ ಸಂಬಂಧ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾತನಾಡಿ, ಗೋವಾ ಸರ್ಕಾರವು ಮಾದಕ ದ್ರವ್ಯ ಸರಬರಾಜು ಮತ್ತು ಸೇವಿಸುವರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಮಾದಕ ದ್ರವ್ಯ ಕಳ್ಳಸಾಗಣಿಕೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಮತ್ತು ಎನ್​ಡಿಪಿಎಸ್​ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದರು.

Share This Article
error: Content is protected !!
";