“ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಕುರಿತ 3 ದಿನಗಳ ಕಮ್ಮಟ; ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳುಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement - 

 ಆಸಕ್ತರು 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ.
ಅರ್ಜಿ ನಮೂನೆ ಹಾಗೂ ವಿವರಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ http://karnatakasahithyaacademy.org ನಿಂದ  ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";