ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಅನ್ನದಾತರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಯುಗಾದಿ ಹಬ್ಬಕ್ಕೆ ಬಂಪರ್‌ಸಬ್ಸಿಡಿ ಘೋಷಣೆ ಮಾಡಿ ರೈತರ ಮೊಗದಲ್ಲಿ ಮಂದಹಾಸ ತಂದಿದೆ ಎಂದು ಬಿಜೆಪಿ ತಿಳಿಸಿದೆ.
ಮಣ್ಣಿಗೆ ಪೋಷಕಾಂಶವನ್ನು ಒದಗಿಸುವ ಕೇಂದ್ರ ಸರ್ಕಾರದ ಪ್ರಯತ್ನದ ಅಂಗವಾಗಿ ರಸಗೊಬ್ಬರಗಳಿಗೆ ಬರೋಬ್ಬರಿ 37,216 ಕೋಟಿ ರೂಪಾಯಿ ಸಬ್ಸಿಡಿ ನೀಡಿ ಕೇಂದ್ರ ಸಚಿವ ಸಂಪುಟ ಅನುಮೋದನೆ ಕೊಟ್ಟಿದೆ.
ದೇಶದ ಬೆನ್ನೆಲುಬು ಆಗಿರುವ ಅನ್ನದಾತರ ಶ್ರೇಯೋಭಿವೃದ್ಧಿಗೆ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ ಎಂದು ಬಿಜೆಪಿ ತಿಳಿಸಿದೆ.