ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡುವುದು ಸಂವಿಧಾನ ವಿರೋಧ ಕೃತ್ಯ-ನರೇಶ್ ರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ಸರ್ಕಾರದ ಕಟ್ಟಡ ಕಾಮಗಾರಿ ಮತ್ತು ಸರಕು ಸಾಗಣಿಕೆ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧವಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ  ಮಾತನಾಡಿದರು.
ಕರ್ನಾಟಕ ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ
4% ಮೀಸಲಾತಿಯನ್ನು ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

ಸಂವಿಧಾನದ ಆರ್ಟಿಕಲ್ 15 ನಿರ್ದಿಷ್ಟವಾಗಿ ರಾಜ್ಯವು ಧರ್ಮ ಮತ್ತು ಜಾತಿ ಆಧಾರದ ಮೇಲೆ ನಾಗರಿಕರ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ ಎಂದರು.

ಜಬರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಧರ್ಮಾಧರಿತ ಮೀಸಲಾತಿ ಮತ್ತು ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವಂತಿಲ್ಲ ಎಂದು ಕಾಲಕಾಲಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಕೂಡ, ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರದ ವೋಟ್ ಬ್ಯಾಂಕ್ ಆಗಿರುವ ಸಮುದಾಯವನ್ನು ಸಮಾಧಾನಪಡಿಸಲು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಒದಗಿಸುವ ಕಾರ್ಯವು ರಾಷ್ಟ್ರೀಯ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತೆಗೆ ಅಪಾಯವನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಮಸೂದೆಯನ್ನು ಅನುಮೋದಿಸದೇ ತಡೆ ಹಿಡಿಯಬೇಕೆಂದು ಅವರು ಒತ್ತಾಯಿಸಿದರು.

ಕರ್ನಾಟಕ ಸರ್ಕಾರದ ಕಟ್ಟಡ ಕಾಮಗಾರಿ ಮತ್ತು ಸರಕು ಸಾಗಣಿಕೆ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿಯನ್ನು ನೀಡಿರುವುದು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪದಾಧಿಕಾರಿಗಳು ದೊಡ್ಡಬಳ್ಳಾಪುರ ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ನೀಡಿದರು.

 ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರವಿ, ಸಹಕಾರ್ಯದರ್ಶಿ ಭಗತ್ ಭಾಸ್ಕರ್ತಾಲೂಕು ಅಧ್ಯಕ್ಷ ಮಧುಸೂದನ್, ತಾಲೂಕು ಬಜರಂಗದಳ ಸಂಯೋಜಕ್ ವಿರಾಜ್, ಮುಖಂಡರಾದ ಮಹಾಂತೇಶ್, ಮನು, ಸೋಮು ಇದ್ದರು.

 

 

Share This Article
error: Content is protected !!
";