ಪ್ರವಾಸಕ್ಕೆ ತೆರಳಿದ್ದ ಮೊರಾರ್ಜಿ ಶಾಲೆಯ 4 ವಿದ್ಯಾರ್ಥಿಗಳು ನೀರುಪಾಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದುಃಖಿಸಿದ್ದಾರೆ.
ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಸಿಎಂ ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";