ಪ್ರವಾಸ ತೆರಳಿದ್ದ ಚಿತ್ರದುರ್ಗದ ಶಾಲಾ ಮಕ್ಕಳ ಬಸ್ ಪಲ್ಟಿ, 40 ಮಕ್ಕಳಿಗೆ ಗಾಯ

News Desk

ಚಂದ್ರವಳ್ಳಿ ನ್ಯೂಸ್, ಜೋಯಿಡಾ:
ವಾರ್ಷಿಕ ಪ್ರವಾಸ ತೆರಳಿದ್ದ ಶಾಲಾ ಮಕ್ಕಳು ಬಸ್​ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗರದ ಸೇಂಟ್ ಆಂತೋನಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರವಾಸ ತೆರಳಿದ್ದು ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಮ ತಪ್ಪಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ 50 ಮಕ್ಕಳ ಪೈಕಿ 40 ಮಕ್ಕಳು ಗಾಯಗೊಂಡಿದ್ದಾರೆ.

ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
3 ಖಾಸಗಿ ಬಸ್​ನಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಮೌಲಂಗಿ ಬಳಿಯ ಹೋಮ್​​ ಸ್ಟೇನಲ್ಲಿ ವಿದ್ಯಾರ್ಥಿಗಳು ತಂಗಿದ್ದರು. ಬೆಳಗ್ಗೆ ಜಲಸಾಹಸ ಕ್ರೀಡೆ ಮುಗಿಸಿಕೊಂಡು ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ತಕ್ಷಣವೇ ಸ್ಥಳೀಯ ಗ್ರಾಮಸ್ಥರು ಸೇರಿ, ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಹೊರತೆಗೆದು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";