ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಕ್ತಿ ಯೋಜನೆಯು ಕರುನಾಡಿನಲ್ಲಿ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ. ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಶಕ್ತಿ ಯೋಜನೆ ಜಾರಿಯಿಂದ ಹಿಡಿದು ಈವರೆಗಿನ ಒಟ್ಟು ಟಿಕೆಟ್‌ಮೌಲ್ಯ ರೂ.9,803 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ ಸೃಷ್ಟಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಈವರೆಗೆ 4,891 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ಬಸ್ ಗಳ ಖರೀದಿ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನಿರ್ವಹಣೆಯ ಉದ್ದೇಶಗಳಿಗಾಗಿ ಸಂಚರಿಸುವ ನಾಡಿನ ಕೋಟ್ಯಂತರ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ನಾವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಶಕ್ತಿ ಯೋಜನೆ ಜಾರಿಯಾದ ನಂತರದಿಂದ ಈವರೆಗೆ 400 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್‌ಮೌಲ್ಯ ರೂ.9 ಸಾವಿರ ಕೋಟಿ ದಾಟಿದೆ. ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವ ಬಗ್ಗೆ ಸಂತಸವಾಗುತ್ತಿದೆ.
ಶಕ್ತಿ ಯೋಜನೆಯಡಿ ನಾಡಿನ ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ 400 ಕೋಟಿ ಬಾರಿ ಉಚಿತ ಪ್ರಯಾಣ ಬೆಳೆಸಿದ್ದಾರೆ. ಶಿಕ್ಷಣ, ಉದ್ಯೋಗ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಪ್ರಯಾಣ ಬೆಳೆಸುವ ಹೆಣ್ಣುಮಕ್ಕಳಿಗೆ ಈ ಯೋಜನೆ ವರದಾನವಾಗಿದೆ.
ಯೋಜನೆ ಜಾರಿಯಾದ ನಂತರದ ಅವಧಿಯಲ್ಲಿ ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ ಮಂದಹಾಸ ಕಂಡಿದ್ದೇನೆ. ಯೋಜನೆಯೊಂದು ನಮ್ಮ ನಿರೀಕ್ಷೆಗೂ ಮೀರಿ ಅರ್ಹರನ್ನು ತಲುಪಿದಾಗ ಮೂಡುವ ಸಾರ್ಥಕ್ಯದ ಭಾವ ಈಗ ನನ್ನದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾವುಕರಾಗಿ ತಿಳಿಸಿದ್ದಾರೆ.