ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ 400 ಚಿತ್ರ ಪ್ರದರ್ಶನಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025ರ ಮಾರ್ಚ್‌1 ರಿಂದ 8ರ ವರೆಗೆ 9 ಕೋಟಿ ವೆಚ್ಚದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ʼಸರ್ವ ಜನಾಂಗದ ಶಾಂತಿಯ ತೋಟʼ ಥೀಮ್‌ನಡಿ ಆಯೋಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಾರಿ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು, 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್‌ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ. ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ ಎಂದು ಸಿಎಂ ತಿಳಿಸಿದ್ದಾರೆ.

ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು, ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";