ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ 404 ಕೋಟಿ ಬಿಡುಗಡೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಶಕ್ತಗೊಳಿಸಲು ಬದ್ಧವಾಗಿದೆ ಮೋದಿ ಸರ್ಕಾರ ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ನೈರ್ಮಲ್ಯ, ಬಯಲು ಶೌಚ ಮುಕ್ತ ಮನೆ ತ್ಯಾಜ್ಯ ನಿರ್ವಹಣೆ ಮತ್ತು ಸಂಸ್ಕರಣೆ, ಚರಂಡಿ -ಶೌಚಾಲಯ ನಿರ್ವಹಣೆ, ಮಳೆ ನೀರು ಕೊಯ್ಲುನೀರಿನ ಮರುಬಳಕೆ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ 404.97 ಕೋಟಿ ರೂ ಗಳ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಧನ್ಯವಾದಗಳನ್ನು ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

 ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳು ಜನಸಾಮಾನ್ಯರ ನಿತ್ಯ ಸೌಲಭ್ಯ ಒದಗಿಸುವ ಕುಂದು ಕೊರತೆಗಳು ಹಾಗೂ ಮೂಲಭೂತ ಸೌಕರ್ಯಗಳ ಅಗತ್ಯತೆಗಳನ್ನು ಸುಲಭವಾಗಿ ಪರಿಹರಿಸಬಲ್ಲ ಗ್ರಾಮೀಣ ಶಕ್ತಿ ಕೇಂದ್ರಗಳು. ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಶಕ್ತಗೊಳಿಸಲು ಈ ಅನುದಾನ ಬಿಡುಗಡೆ ಮಾಡಲಾಗಿದ್ದು, 28 ವಿಷಯಗಳ ಅಡಿಯಲ್ಲಿ ಸ್ಥಳ- ನಿರ್ದಿಷ್ಟ ಅಗತ್ಯಗಳನ್ನು ಪರಿಹರಿಸಲು ಅನುಕೂಲವಾಗಲಿದೆ. ಈ ಹಣವನ್ನು ಅಭಿವೃದ್ಧಿ ಉಪಕ್ರಮಗಳಿಗೆ ಬಳಸಲು ಉದ್ದೇಶಿಸಲಾಗಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

 

Share This Article
error: Content is protected !!
";