ಕಡಲೆ ಮಿಠಾಯಿ ತಿಂದ 46 ವಿದ್ಯಾರ್ಥಿಗಳಿಗೆ ವಾಂತಿ

News Desk

ಚಂದ್ರವಳ್ಳಿ ನ್ಯೂಸ್, ಪಾವಗಡ:
ಕಡಲೆ ಮಿಠಾಯಿ(ಕಡಲೆ ಚಿಕ್ಕಿ) ತಿಂದ 46 ವಿದ್ಯಾರ್ಥಿಗಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ವಾಂತಿಯಾಗಿ ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

- Advertisement - 

ಶುಕ್ರವಾರ ಮಧ್ಯಾಹ್ನ ಬಿಸಿಯೂಟ ವೇಳೆ ನೀಡಿದ್ದ ಚಿಕ್ಕಿ ತಿಂದು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಕೊಡಲೇ ಅಸ್ವಸ್ಥ ಮಕ್ಕಳಿಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

- Advertisement - 

ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ತಹಶೀಲ್ದಾರ್ ವರದರಾಜು, ಬಿಇಒ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

 

- Advertisement - 

 

Share This Article
error: Content is protected !!
";