ಎಂಜಿನಿಯರಿಂಗ್ ವಿದ್ಯಾರ್ಥಿಗಳ ವೃತ್ತಿ ತರಬೇತಿಗಾಗಿ 5 ಕೋಟಿ ವೆಚ್ಚ: ವಿಟಿಯು ಕುಲಪತಿ ಡಾ.ಎಸ್ ವಿದ್ಯಾಶಂಕರ್ 

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು;
ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಶಿಕ್ಷು [ಇಂಟರನ್ ಶಿಪ್] ತರಬೇತಿ ಪಡೆಯಲು ವಿವಿಧ ಕಂಪೆನಿಗಳ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು, ಇದಕ್ಕಾಗಿ ವಿಶ್ವೇಶ್ವರಯ್ಯ ಸಂಶೋಧನಾ ಮತ್ತು ನಾವೀನ್ಯತೆ ಸಂಸ್ಥೆಯನ್ನು ಹುಟ್ಟುಹಾಕಿ 5 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉಪಕುಲಪತಿಗಳು ಡಾ ಎಸ್. ವಿದ್ಯಾಶಂಕರ್ ತಿಳಿಸಿದ್ದಾರೆ. 

 ನಗರದ ಸೋಮನಹಳ್ಳಿಯ ಆಚಾರ್ಯ ಪಾಠಶಾಲಾ ತಾಂತ್ರಿಕ ವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ಸಂಶೋಧನಾ ಮತ್ತು ನಾವೀನ್ಯತೆ ಸಂಸ್ಥೆಯ ಸಹಾಯೋಗದೊಂದಿಗೆ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಎಐಓಟಿ ಇಂಟರ್ನ್ ಶಿಪ್ ಉದ್ಘಾಟಿಸಿ ಮಾತನಾಡಿದ ಅವರು,

ಕಳೆದ ಎರಡು ವರ್ಷಗಳಿಂದ ವಿಟಿಯುನಲ್ಲಿ ಸಾಕಷ್ಟು ಕಂಪನಿಗಳ ಜೊತೆ ಎಂಓಯು ಮಾಡಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಪಡೆಯಲು ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲಾಗಿದೆ ಎಂದರು. 

 ಶೈಕ್ಷಣಿಕ ಸಂಸ್ಥೆ ಮತ್ತು ಕಂಪನಿಗಳ ನಡುವೆ ಇರುವ ಅಂತರವನ್ನು ಕಡಿಮೆ ಮಾಡಲು ವಿಟಿಯು ಸಾಕಷ್ಟು ರೀತಿಯಲ್ಲಿ ಪ್ರಯತ್ನಿಸುತ್ತಿದೆ. ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕೌಶಲ್ಯ ತರಬೇತಿಯನ್ನು ತಮ್ಮ ಕ್ಯಾಂಪಸ್ ನಲ್ಲಿ ನೀಡಲು ಅನುಕೂಲವಾಗುವಂತಹ ವ್ಯವಸ್ಥೆ ಕಲ್ಪಿಸಲಾಗಿದೆ.

2022 ರಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಕೊನೆಯ ವರ್ಷದ ಇಂಜಿನಿಯರಿಂಗ್ ಪದವಿಯಲ್ಲಿ ಯಾವುದೇ ತೊಂದರೆ ಇಲ್ಲದೇ ಈಗ ಚಾಲ್ತಿಯಲ್ಲಿರುವ ವಿವಿಧ ತಂತ್ರಜ್ಞಾನಗಳಲ್ಲಿ ತರಬೇತಿ ಪಡೆಯಲು ಅನುಕೂಲವಾಗುವಂತಹ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. 

ಎಪಿಎಸ್ ಶೈಕ್ಷಣಿಕ ಸಂಸ್ಥೆಯ ಅಧ್ಯಕ್ಷ ಡಾ ಸಿಎ ವಿಷ್ಣು ಭರತ್ ಆಲಂಪಲ್ಲಿ, ಉಪಾಧ್ಯಾಕ್ಷ ಡಾ ಎಸ್ ಸಿ ಶರ್ಮಾ, ಕಾರ್ಯದರ್ಶಿ ಪ್ರೊಫೆಸರ್ ಎ ಪ್ರಾಂಶುಪಾಲರಾದ ಡಾ ಡಿ ಜಿ ಆನಂದ್‌, ಉಪ ಪ್ರಾಂಶುಪಾಲರಾದ ಡಾ ಕೆ ಎಸ್ ಆನಂದ್ ಮತ್ತಿತರರು ಉಪಸ್ಥಿತರಿದ್ದರು.

  

- Advertisement -  - Advertisement - 
Share This Article
error: Content is protected !!
";