ಒಲಿಂಪಿಕ್ಸ್ , ಏಷ್ಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಗೆದ್ದವರಿಗೆ 5 ಕೋಟಿ ಪ್ರೋತ್ಸಾಹ ಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಾವುದೇ ಜಾತಿ, ಧರ್ಮದ ಬೇಧವಿಲ್ಲದೆ ಎಲ್ಲ ವರ್ಗದ ಯುವಜನರಿಗೆ ಸಮಾನ ಅವಕಾಶಗಳನ್ನು ನೀಡಿ, ಅವರನ್ನು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸದೃಢವಾಗಿಸಿ, ಸರ್ವರನ್ನು ಒಳಗೊಂಡ ಸಶಕ್ತ ಕರ್ನಾಟಕವನ್ನು ನಿರ್ಮಾಣ ಮಾಡುವಲ್ಲಿ ರಾಜ್ಯ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ
38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನೇರ ನಗದು ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.

ಜನಪ್ರಿಯ ಗ್ಯಾರಂಟಿ ಯೋಜನೆಯೊಂದಿಗೆ ಕ್ರೀಡಾ ಕ್ಷೇತ್ರಕ್ಕೂ ಅಪಾರ ಬೆಂಬಲವನ್ನು ನೀಡುತ್ತಿದೆ. ಈವರೆಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದ ವಿಜೇತರಿಗೆ 5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ 3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಲಕ್ಷ ನಗದು ಬಹುಮಾನವನ್ನು ಸರ್ಕಾರದಿಂದ ನೀಡಲಾಗುತ್ತಿತ್ತು.

- Advertisement - 

ಆದರೆ, ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಸಲುವಾಗಿ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ನೀಡಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ಬಜೆಟ್‌ನಲ್ಲೂ ಕ್ರೀಡಾಕ್ಷೇತ್ರಕ್ಕೆ ವಿಶೇಷ ಅನುದಾನ, ಬೆಂಬಲವನ್ನು ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಈ ಮೂಲಕ ಯುವ ಜನರ ಏಳಿಗೆಗೆ ಬೆನ್ನುಲುಬಾಗಿ ರಾಜ್ಯ ಸರ್ಕಾರವು ಸದಾ ಇರಲಿದೆ. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಕ್ರೀಡಾಪಟುಗಳ ಎಲ್ಲ ಬೇಡಿಕೆಗಳನ್ನು ಮುಂಚಿನಿಂದಲೂ ಈಡೇರಿಸುತ್ತಾ ಬಂದಿದ್ದೇನೆ. ಕ್ರೀಡೆಯೊಂದಿಗೆ ಶಿಕ್ಷಣವನ್ನೂ ಪಡೆಯಬೇಕು. ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್‌ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

- Advertisement - 

ಬಜೆಟ್‌ನಲ್ಲಿ ಘೋಷಿಸಿರುವಂತೆ ಒಲಿಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ರೂ., ಬೆಳ್ಳಿ ಗೆದ್ದವರಿಗೆ 3 ಕೋಟಿ ರೂ. ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ. ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ.  ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ದೊರಕಲೆಂದು ಹಾರೈಸುತ್ತೇನೆ.

2015 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಿನ್ನದ ಪದಕ ಗೆದ್ದ ವಿಜೇತರಿಗೆ 5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ 3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಲಕ್ಷ ರೂ. ನೀಡುವುದಾಗಿ ತಿಳಿಸಲಾಗಿತ್ತು, ನಮ್ಮ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯವರು ಪದಕ ವಿಜೇತರಿಗೆ ನೀಡಲಾಗುವ ನಗದು ಪುರಸ್ಕಾರವನ್ನು ಹೆಚ್ಚಿಸಬೇಕೆಂದು ಕೋರಿದ್ದರು. ಅದರಂತೆ ಮನವಿಯನ್ನು ಪುರಸ್ಕರಿಸಿ, ಗೆದ್ದ ಪ್ರತಿಯೊಬ್ಬ ಪದಕ ವಿಜೇತರಿಗೂ ನಗದು ಪುರಸ್ಕಾರವನ್ನು ನೀಡಲು ತೀರ್ಮಾನಿಸಿದ್ದೇನೆ.

ಕ್ರೀಡಾಪಟುಗಳು ಪದಕ ಗೆಲ್ಲಲು ಸಹಕರಿಸುವ ಮ್ಯಾನೇಜರ್ ಹಾಗೂ ತರಬೇತುದಾರರಿಗೂ ನಗದು ಪುರಸ್ಕಾರವನ್ನು ನೀಡಲಾಗುವುದು. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಕ್ರೀಡಾಪಟುಗಳ ಎಲ್ಲ ಬೇಡಿಕೆಗಳನ್ನು ಮುಂಚಿನಿಂದಲೂ ಈಡೇರಿಸುತ್ತಾ ಬಂದಿದ್ದೇನೆ. ಕ್ರೀಡೆಯೊಂದಿಗೆ ಶಿಕ್ಷಣವನ್ನೂ ಪಡೆಯಬೇಕು. ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್ ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ. ಕ್ರೀಡಾಪಟು ಸುನಿಲ್ ಭಾಟಿಯವರು ಗ್ರೂಪ್ –1 ಸ್ಥಾನ ಸಿಕ್ಕಿದ್ದು ಪೋಲಿಸ್ ಅಬಕಾರಿ ಇಲಾಖೆಯಲ್ಲಿ ಡಿವೈಎಸ್‌ಪಿಯಾಗಿದ್ದಾರೆ. ಬಡ್ತಿಯಾಗಿ ಉನ್ನತ ಹುದ್ದೆಗೆ ಹೋಗುವ ಅವಕಾಶಗಳೂ ಇರುತ್ತವೆ.

ಬಜೆಟ್ ನಲ್ಲಿ ಘೋಷಿಸಿರುವಂತೆ ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ  ಕಾಮನ್ ವೆಲ್ತ್ ಗೇಮ್ಸ್  ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ರೂ., ಬೆಳ್ಳಿ ಗೆದ್ದವರಿಗೆ 3 ಕೋಟಿ ರೂ. ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು.

ಬಹುಮಾನ ಗೆದ್ದರೆ ಅದಕ್ಕಿಂತ ಸಂತೋಷ ಕೊಡುವ ವಿಚಾರ ಮತ್ತೊಂದಿಲ್ಲ. ಸೋಲು – ಗೆಲುವು ಇದ್ದೆ ಇರುತ್ತದೆ, ಆದರೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸಾಮರ್ಥ್ಯವಿದ್ದರೆ ಮಾತ್ರ ಒಲಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯ. ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕೆಂದು ಸಲಹೆ ನೀಡಲು ಬಯಸುತ್ತೇನೆ. ನಾಡಿನ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡಬೇಕು.

ದೇಶದಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಕ್ರೀಡಾಪಟುಗಳು ಇನ್ನಷ್ಟು ಎತ್ತರಕ್ಕೆ ಹೋಗಬೇಕು. ಕಾಮನ್ ವೆಲ್ತ್ ಗೇಮ್ಸ್, ಒಲಂಪಿಕ್ಸ್, ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಬೇಕು. ಶ್ರದ್ಧೆ, ಏಕಾಗ್ರತೆಯಿಂದ ಪ್ರಯತ್ನ ಮಾಡಿದರೆ ಕಷ್ಟವೇನಿಲ್ಲ. ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರೆ ಎಲ್ಲವೂ ಸಾಧ್ಯ.  ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಅರವತ್ತು ಕ್ರೀಡಾಪಟುಗಳಿಗೆ ತರಬೇತಿ ನೀಡಲು 10 ಲಕ್ಷ ರೂ. ಗಳನ್ನು ಸರ್ಕಾರ ನೀಡುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

 

 

Share This Article
error: Content is protected !!
";