ಚಂದ್ರವಳ್ಳಿ ನ್ಯೂಸ್, ಹರಿಹರ:
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಇವರು ಏ.22 ರಿಂದ 26 ರವರೆಗೆ ದಾವಣಗೆರೆ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಈ ಪ್ರವಾಸದ ಅವಧಿಯಲ್ಲಿ ಏ.24 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿರುತ್ತಾರೆ.
ಹರಿಹರ ತಾಲ್ಲೂಕಿನ ಸಾರ್ವಜನಿಕರು ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬ ವಾಗಿದಲ್ಲಿ, ತೊಂದರೆಯಾಗಿದ್ದಲ್ಲಿ,ಲಂಚಕ್ಕೆ ಬೇಡಿಕೆ ಇಡುವು ದಾಗಲೀ ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತ ಉಪಲೋಕಾಯುಕ್ತರು ಇವರ ಸಮಕ್ಷಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ತಹಶೀಲ್ದಾರ್ ಕೆ.ಎಂ.ಗುರುಬಸವರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.