ಭೀಕರ ಅಪಘಾತ, ಬೆಂಗಳೂರಿನ 5 ಮಂದಿ ಸಾವು

News Desk

ಚಂದ್ರವಳ್ಳಿ ನ್ಯೂಸ್, ತಿರುಪತಿ:
ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ್ದು ಇಬ್ಬರು ಗಾಯಗೊಂಡಿದ್ದಾರೆ.

 ವೇಗವಾಗಿ ಚಲಿಸುತ್ತಿದ್ದ ಕಾರು ಕಾಣಿಪಾಕಂ ಸಮೀಪದ ತೋತಾಪಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಎರಿಟಿಗಾ ಕಾರು, ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

 

Share This Article
error: Content is protected !!
";