ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಸೌಲಭ್ಯ-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹವಾಮಾನ ವೈಪರೀತ್ಯ
, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರ ಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";