ಎಸ್ಎಸ್ಎಲ್ ಸಿ ಪರೀಕ್ಷೆಗೆ ಹೆದರಿ 5 ವಿದ್ಯಾರ್ಥಿಗಳು ನಾಪತ್ತೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಾವೇರಿ:
ರಾಜ್ಯದಲ್ಲಿ ಮಾರ್ಚ್ 18ರಿಂದ
SSLC ಪರೀಕ್ಷೆಗಳು ಆರಂಭವಾಗಲಿದ್ದು, ಹತ್ತನೇ ತರಗತಿ ಪರೀಕ್ಷೆಗೆ ಹೆದರಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ 5 ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ರಾಣೆಬೆನ್ನೂರು ತಾಲೂಕು ಸುಣಕಲಬಿದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಅಂಜಿ ಹಾಸ್ಟೆಲ್​​ನಿಂದ ನಾಪತ್ತೆಯಾಗಿದ್ದು, ವಿದ್ಯಾರ್ಥಿಗಳ ಕುರಿತ ಮಾಹಿತಿಯನ್ನು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಮುಚ್ಚಿಟ್ಟಿರುವ ಆರೋಪ ಕೇಳಿಬಂದಿದೆ.

- Advertisement - 

ಮಕ್ಕಳು ಇದ್ದಾರೆ, ಸಿಕ್ಕಿದ್ದಾರೆ ಎಂದು ವಸತಿ ಶಾಲೆಯವರು ಹೇಳುತ್ತಿದ್ದು, ಅವರು ಬೇರೆಡೆ ಇದ್ದಾರೆಂದು ಹಾರಿಕೆ ಉತ್ತರ ನೀಡುತ್ತಿರುವ ಬಗ್ಗೆಯೂ ದೂರಲಾಗಿದೆ. ರಾತ್ರಿ ವೇಳೆ ವಾಚ್​​ಮೆನ್​​ ಇಲ್ಲದಿರೋದನ್ನು ಗಮನಿಸಿದ್ದ ವಿದ್ಯಾರ್ಥಿಗಳು, ನಸುಕಿನ ಜಾವ ವಸತಿ ಶಾಲೆ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಶಾಲೆಯಲ್ಲಿ ಪೂರ್ವಸಿದ್ಧತಾ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ ಇವುಗಳಿಗೆ ಹೆದರಿ ಅವರು ವಸತಿಶಾಲೆಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ.

 

- Advertisement - 

Share This Article
error: Content is protected !!
";