ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಕೀಲರ ಸಂಘವು ಡಿ.3ರಂದು ಆಯೋಜಿಸಿರುವ ವಕೀಲರ ದಿನಾಚರಣೆ ಹಾಗೂ ವಕೀಲರ ವೃತ್ತಿಯಲ್ಲಿ 50 ಮತ್ತು 25 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ ವಕೀಲರುಗಳಿಗೆ ಸನ್ಮಾನ ಸಮಾರಂಭವನ್ನು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉಪಸ್ಥಿತರಿರುವರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ್ ವಾಸುದೇವ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಿಇಒ ಸೋಮಶೇಖರ್
ಜಿಲ್ಲಾ ನ್ಯಾಯಾಧೀಶರುಗಳಾದ ಶಂಕರಪ್ಪ ನಿಂಬಣ್ಣ ಕಲ್ಕಣಿ, ಗಂಗಾಧರ ಸಿ.ಎಚ್, ಮಮತಾ ಡಿ, ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ.